Breaking:

ಶಾಲಾ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಬಾಲಕಿ

ಬಾಲಕಿಯೋರ್ವಳು ಶಾಲಾ ಶೌಚಾಲಯದಲ್ಲಿ ಮಗುವಿಗೆ ಜನ್ಮ ನೀಡಿದ ಘಟನೆ ಆಂಧ್ರಪ್ರದೇಶದ ಕೋತಪಟ್ಟಣಂನಲ್ಲಿ ನಡೆದಿದೆ.

ಕೀಮಕುರ್ತಿ ಮಂಡಲದ ನಿವಾಸಿಯಾಗಿರುವ 16 ವರ್ಷದ ಬಾಲಕಿ ಕೋತಪಟ್ಟಣಂನ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾಲಯದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಬಾಲಕಿ ಶಾಲೆಯ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿದ್ದಾಳೆ. ಜನಿಸಿದ ಕೆಲವೇ ಕ್ಷಣಗಳಲ್ಲಿ ನವಜಾತ ಶಿಶು ಮೃತಪಟ್ಟಿದೆ.

ಗರ್ಭಿಣಿಯಾಗಿದ್ದ ಬಾಲಕಿ ಈ ಬಗ್ಗೆ ಶಾಲೆಯ ಸಹಪಾಠಿಗಳಿಗೆ, ಶಿಕ್ಷಕರಿಗೆ ವಿಷಯ ತಿಳಿಸಿರಲಿಲ್ಲ. ಹೊಟ್ಟೆ ನೋವಿನ ಹಿನ್ನೆಲೆ ಬಾಲಕಿ ಶೌಚಾಲಯಕ್ಕೆ ತೆರಳಿದ್ದಾಳೆ‌. ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಹೆರಿಗೆ ನೋವು ಜಾಸ್ತಿಯಾಗಿ ಮಗುವಿಗೆ ಜನ್ಮ ನೀಡಿದ್ದಾಳೆ. ಶೌಚಾಲಯಕ್ಕೆ ಹೋದ ವಿದ್ಯಾರ್ಥಿನಿ ಕ್ಲಾಸ್ ಗೆ ಬಾರದ ಕಾರಣ ಸಹಪಾಠಿಗಳು, ಶಿಕ್ಷಕರು ಶೌಚಾಲಯದ ಬಳಿ ಹೋದಾಗ ಬಾಲಕಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ.

ಗಂಭೀರ ಸ್ಥಿತಿಯಲ್ಲಿದ್ದ  ಬಾಲಕಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ನವಜಾತ ಶಿಶು ಜನಿಸಿದ ಕೆಲವೇ ಕ್ಷಣಗಳಲ್ಲಿ ಮೃತಪಟ್ಟಿದೆ.

Share this article

ಟಾಪ್ ನ್ಯೂಸ್