ಮಂಗಳೂರು: ಎಸ್‌ಡಿಪಿಐ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸಭೆಯು ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ರವರ ಉಪಸ್ಥಿತಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ರವರ ಅದ್ಯಕ್ಷತೆಯಲ್ಲಿ ಬಿ ಸಿ ರೋಡ್ ನಲ್ಲಿ ಪಕ್ಷದ ಕಚೇರಿಯಲ್ಲಿ ನಡೆಯಿತು.
ಸಭೆಯಲ್ಲಿ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಪಕ್ಷದ ಆಂತರಿಕ ಚುನಾವಣೆ ಸೇರಿದಂತೆ ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗಿದೆ.
ಸಭೆಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್ ಲತೀಫ್ ಪುತ್ತೂರು, ಅಬ್ದುಲ್ ಮಜೀದ್ ತುಂಬೆ, ರಾಜ್ಯ ಸಮಿತಿ ಸದಸ್ಯರಾದ ರಿಯಾಝ್ ಕಡಂಬು, ಅಥಾವುಲ್ಲ ಜೋಕಟ್ಟೆ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಅಶ್ರಫ್ ಅಡ್ಡೂರು, ಜಮಾಲ್ ಜೋಕಟ್ಟೆ, ಕಾರ್ಯದರ್ಶಿಗಳಾದ ಶಾಕೀರ್ ಅಳಕೆಮಜಲು, ಸುಹೈಲ್ ಖಾನ್ , ಅಕ್ಬರ್ ಬೆಳ್ತಂಗಡಿ ಹಾಗು ಪದಾಧಿಕಾರಿಗಳು ಸಮಿತಿ ಸದಸ್ಯರು ಮತ್ತು ವಿಧಾನಸಭಾ ಕ್ಷೇತ್ರ ಸಮಿತಿಯ ಅಧ್ಯಕ್ಷರು ಮತ್ತು ಕಾರ್ಯದರ್ಶಿಗಳು ಉಪಸ್ಥಿತರಿದ್ದರು.