ಹಾಸನ: ಭಾರೀ ಮಳೆಗೆ ಸಕಲೇಶಪುರ ಬಳಿ ಗುಡ್ಡ ಕುಸಿತದಿಂದ ಸುಮಾರು 200 ಅಡಿಗಳಷ್ಟು ದೂರದ ರಸ್ತೆ ಕುಸಿದುಕೊಂಡು ಹೋಗಿದ್ದು, 10 ಗ್ರಾಮಗಳ ಜನತೆ ಸಂಪರ್ಕ ಕಳೆದುಕೊಂಡಿದ್ದಾರೆ.
ಸಕಲೇಶಪುರ ತಾಲೂಕಿನ ಕುಂಬರಡಿ ಸಮೀಪ ಘಟನೆ ನಡೆದಿದೆ. ಕುಂಬರಡಿ ಹಾಗೂ ಹಾರ್ಲೇ ಎಸ್ಟೇಟ್ ಮಧ್ಯೆ ಭೂ ಕುಸಿತವಾಗಿದೆ.
200 ಮೀಟರ್‌ಗೂ ಹೆಚ್ಚು ದೂರ ರಸ್ತೆ ಕೊಚ್ಚಿಹೋಗಿದ್ದು, ಹಲವು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಈ ರಸ್ತೆಯ ಪಕ್ಕದಲ್ಲಿ ಎತ್ತಿನಹೊಳೆ ಕಾಮಗಾರಿಗಾಗಿ ಕೆಲಸ ಮಾಡಲಾಗಿತ್ತು. ಎತ್ತಿನಹೊಳೆ ಅವೈಜ್ಞಾನಿಕ ಕಾಮಗಾರಿಯಿಂದಲೇ ಭೂಕುಸಿತವಾಗಿದೆ ಎಂದು ಆರೋಪಿಸಲಾಗಿದೆ.