ಕನ್ನಡದ ಹಿರಿಯ ಪತ್ರಕರ್ತ ಶಶಿಧರ ಭಟ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು ಮೈಸೂರಿನ ಗೋಪಾಲಗೌಡ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ತಾನು ಅನಾರೋಗ್ಯದಿಂದ ಇರುವ ಬಗ್ಗೆ ಶಶಿಧರ್ ಭಟ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಕೂಡ ಹಾಕಿದ್ದರು.
ಶಶಿಧರ್ ಭಟ್ ಅವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ದೂರವಾಣಿ ಮೂಲಕ ಮಾತನಾಡಿದ್ದಾರೆ.
ಈ ವೇಳೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ ಮುಖ್ಯಮಂತ್ರಿಗಳು, ಆಸ್ಪತ್ರೆಯ ವೈದ್ಯರ ಜೊತೆಗೂ ಮಾತನಾಡಿ ಶಶಿಧರ್ ಭಟ್ ಅವರ ಆರೋಗ್ಯದ ಬಗ್ಗೆ ಮಾಹಿತಿಯನ್ನು ಪಡೆದಿದ್ದಾರೆ.