ಹಾಡಹಗಲೆ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಶೇಷಾದ್ರಿ ಪುರಂ ಪೊಲೀಸ್ ಠಾಣೆ ಬಳಿ ನಡೆದಿದೆ.
ಅಜಿತ್ ಕುಮಾರ್ (25) ಕೊಲೆಯಾದವನು. ಶೇಷಾದ್ರಿಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ರಶಿಲ್ಲಾರ್ ಸ್ಟ್ರೀಟ್‌ನಲ್ಲಿ ಅಜಿತ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಕೇಂದ್ರ ವಿಭಾಗದ ಡಿಸಿಪಿ ಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಹಂತಕರಿಗಾಗಿ ಹುಡುಕಾಟ ನಡೆಸಿರುವ ಪೊಲೀಸರು, ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.