ಶಿವಮೊಗ್ಗ ಕ್ಲಾರ್ಕ್ ಪೇಟೆಯಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಭುವನೇಶ್ವರಿ, ಮಾರುತಿ ಹಾಗೂ ದರ್ಶನ್ ಮೃತರು ತಿಳಿದು ಬಂದಿದೆ. ಇವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಭುವನೇಶ್ವರಿ ಹಾಗೂ ಅವರ ತಮ್ಮ ಹಾಗೂ ಮಗ ಸಾವನ್ನಪ್ಪಿದವರು. ಇವರು ವಿಷ ಸೇವಿಸಿ ಕಳೆದ ಭಾನುವಾರವೇ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ವಿಜಯ್ ಗ್ಯಾರೇಜ್ ಬಳಿಇವರ ಮನೆಯಿದ್ದು, ಇವರಿಗೆ ಪೋನ್ ಸಂಪರ್ಕ ಸಿಗದ ಹಿನ್ನೆಲೆ ಸಂಬಂಧಿಕರೊಬ್ಬರು ಮನೆಯ ಬಳಿಗೆ ಬಂದು ವಿಚಾರಿಸಿದ್ದಾರೆ. ಈ ವೇಳೆ ಮೂವರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.