ಶಿವಮೊಗ್ಗದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಟ್ ಆಗಿರುವ ಮುಂಗೈಯನ್ನು ಯಶಸ್ವಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಸರಿಪಡಿಸಲಾಗಿದೆ.
ಶಿಕಾರಿಪುರ ತಾಲೂಕಿನ ಮಿಲ್ ಒಂದರಲ್ಲಿ ಕೆಲಸ ಮಾಡುವ ವೇಳೆ ಕಾರ್ಮಿಕನ ಮುಂಗೈ ಸಂಪೂರ್ಣವಾಗಿ ಕಟ್ ಆಗಿದೆ. ಕೂಡಲೇ ತುಂಡಗಿದ್ದ ಮುಂಗೈಯನ್ನು ಐಸ್ ಬಾಕ್ಸ್ ನಲ್ಲಿ ಇಟ್ಟುಕೊಂಡು ಆಸ್ಪತ್ರೆಗೆ ಬರಲಾಗಿದೆ.
ತಕ್ಷಣಕ್ಕೆ ಕಾರ್ಯ ಪ್ರವೃತ್ತರಾಗಿದ್ದ ವ್ಯಾಸ್ಕ್ಯುಲರ್ ಸರ್ಜನ್ ಡಾ.ಚೇತನ್ ಹಾಗೂ ಮೂಳೆ ರೋಗ ತಜ್ಞ ಡಾ. ಮಂಜುನಾಥ್ ನೇತೃತ್ವದ ತಂಡ ಸತತ ಏಳು ಗಂಟೆ ಶಸ್ತ್ರ ಚಿಕಿತ್ಸೆಯಲ್ಲಿ ಮುಂಗೈನ ಮಾಂಸ ಖಂಡ, ಮೂಳೆ ಹಾಗೂ ನರಗಳನ್ನು ಜೋಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಸ್ತ್ರ ಚಿಕಿತ್ಸೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಕಾರ್ಮಿಕ ತನ್ನ ಕೈಯನ್ನು ವಾಪಾಸ್ಸು ಪಡೆದಿದ್ದು, ಇದೀಗ ಗುಣಮುಖವಾಗಿ ಡಿಸ್ಚಾರ್ಜ್ ಆಗಿದ್ದಾನೆ. ವೈದ್ಯರ ಕಾರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.