Breaking:

ಶಿರಾಡಿ ಘಾಟ್ ನ ದೊಡ್ಡತಪ್ಲು ಬಳಿ ಭೂಕುಸಿತ

ಶಿರಾಡಿ ಘಾಟ್ ನ ದೊಡ್ಡತಪ್ಲು ಬಳಿ ಮತ್ತೆ ಭೂಕುಸಿತ ಸಂಭವಿಸಿದ್ದು, ಎರಡು ಕಂಟೇನರ್ ಗಳು ಮಣ್ಣಲ್ಲಿ ಮುಳುಗಿದ್ದು, ಟ್ಯಾಂಕರ್‌ನಲ್ಲಿ ಸಿಲುಕಿದ್ದ ಚಾಲಕರನ್ನು ರಕ್ಷಿಸಲಾಗಿದೆ.

ಮೂವರು ಚಾಲಕರನ್ನು ರಕ್ಷಿಲಾಗಿದ್ದು, ಸ್ಥಳದಲ್ಲಿ ಮತ್ತಷ್ಟು ಗುಡ್ಡ ಕುಸಿತ ಸಂಭವಿಸುವ ಸಾಧ್ಯತೆ ಇದೆ.

ಗುಡ್ಡ ಕುಸಿತದಿಂದ ಮಣ್ಣಿನಡಿ ಸಿಲುಕಿದ ಕಂಟೇನರ್ ರೈಲ್ವೆ ಹಳಿ‌ ಮೇಲೆ ಬೀಳುವ ಆತಂಕ ಎದುರಾಗಿದೆ. ರೈಲ್ವೆ ಹಳಿ‌ ಮೇಲೆ ಹಾದು ಹೋಗಿರುವ ರಸ್ತೆಯ ತುದಿಯಲ್ಲಿ ಕಂಟೇನರ್‌ ಉರುಳಿಬಿದ್ದಿದೆ.

ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್‌ನಲ್ಲಿ ಮತ್ತೆ ಮತ್ತೆ ಭೂಕುಸಿತ ಸಂಭವಿಸಿರುವುದಕ್ಕೆ ಕಳಪೆ ಗುಣಮಟ್ಟದ ಕಾಮಗಾರಿ ಕಾರಣ ಎಂದು ಆಪಾದಿಸಲಾಗಿದೆ.

Share this article

ಟಾಪ್ ನ್ಯೂಸ್