Breaking:

ಶಿರೂರು ಗುಡ್ಡೆ ಕುಸಿತ; ಅರ್ಜುನ್ ಮೃತದೇಹ ಪತ್ತೆ? ಏನಿದು ಬೆಳವಣಿಗೆ?

ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ಬಳಿ  ಗುಡ್ಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ  ಮಹತ್ವದ ಬೆಳವಣಿಗೆ ನಡೆದಿದ್ದು, ಗುಡ್ಡ ಕುಸಿತಗೊಂಡ ಸ್ಥಳದಿಂದ 25 ಕಿಮೀ ದೂರದಲ್ಲಿನ ಹೊನ್ನಾವರ ಸಮುದ್ರದಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ.

ಈ ಶವ ಗಂಗಾವಳಿ ನದಿಯಲ್ಲಿ ಕೊಚ್ಚಿ ಹೋದ ಲಾರಿ ಚಾಲಕ ಅರ್ಜುನ್​ (30) ಅವರದ್ದು ಎಂದು ಶಂಕಿಸಲಾಗಿದೆ. ಮೃತದೇಹ ಯಾರದ್ದು ಎಂಬುದು ಇನ್ನೂ ದೃಢವಾಗಿಲ್ಲ.

ಸದ್ಯ ಕರಾವಳಿ ಪೊಲೀಸರು ಮೃತದೇಹವನ್ನು ದಡಕ್ಕೆ ತಂದು, ಡಿಎನ್​ಎ ಪರೀಕ್ಷೆಗೆ ಕಳುಹಿಸಿದ್ದಾರೆ. ಡಿಎನ್​ಎ ಪರೀಕ್ಷೆಗಾಗಿ ಅರ್ಜುನ್​ ಸಹೋದರ ಅಭಿಜಿತ್​​ನ ಮಾದರಿಗಳನ್ನು ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸ್ಪಷ್ಟ ಮಾಹಿತಿ ಡಿಎನ್ ಎ ಪರೀಕ್ಷೆ ಫಲಿತಾಂಶದ ಬಳಿಕ ಲಭ್ಯವಾಗಲಿದೆ.

Share this article

ಟಾಪ್ ನ್ಯೂಸ್