ಶಿವಮೊಗ್ಗ: ಯುವಕನೋರ್ವ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಪ್ರಕರಣಕ್ಕೆ ಸಂಬಂದಿಸಿದಂತೆ ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್ನನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್ನನ್ನು ಕೇಳಿಕೊಂಡಿದ್ದಳು. ಇದರಿಂದ ಸೃಜನ್ ಪ್ರಿಯತಮೆಯನ್ನೇ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ.
ಮಗಳು ನಾಪತ್ತೆ ಹಿನ್ನೆಲೆ ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು, ಆ ಬಳಿಕ ವಿಚಾರ ಬೆಳಕಿಗೆ ಬಂದಿದೆ.