ಮುಡಾ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ನಿನ್ನೆ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮೋದನೆ ನೀಡಿದ್ದಾರೆ. ಇದರ ಬೆನ್ನಲ್ಲಿ ದೂರುದಾರರ ದೂರಿಗೆ ತೂಕ ಬಂದಿದೆ.
ಇದೀಗ ಸಿಎಂ ಸಿದ್ದರಾಮಯ್ಯಗೆ ನ್ಯಾಯಾಲಯದಲ್ಲಿ ಇದನ್ನು ಪ್ರಶ್ನಿಸುವ ಅಧಿಕಾರವಿದೆ. ಈ ಪ್ರಕರಣದ ವಿಚಾರಣೆ ನಡೆಸಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆಯೂ ಹಲವಾರು ಆಯ್ಕೆಗಳಿವೆ. ಮೇಲ್ನೋಟಕ್ಕೆ ತನಿಖೆಗೆ ಅರ್ಹ ಎಂದು ಕಂಡು ಬಂದರೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಅದೇಶ ನೀಡಬಹುದು. ನ್ಯಾಯಾಲಯದ ಮುಂದೆ ಹಾಜರಾಗಲು ಮುಖ್ಯಮಂತ್ರಿಗಳಿಗೆ ಸಮನ್ಸ್ ನೀಡಬಹುದು. ಈ ದೂರಿನಲ್ಲಿ ಯಾವುದೇ ಹುರುಳಿಲ್ಲ ಎಂದು ಪ್ರಕರಣವನ್ನು ತಿರಸ್ಕರಿಸಬಹುದಾಗಿದೆ.
ಒಂದು ವೇಳೆ ಹೈಕೋರ್ಟ್ನಲ್ಲಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ತಿರಸ್ಕೃತಗೊಂಡರೆ ಅವರು ಸುಪ್ರೀಂ ಕೋರ್ಟ್ ಮೆಟಿಲೇರುವುದು ಪಕ್ಕಾ ಆಗಿದೆ. ಒಂದು ವೇಳೆ ಸುಪ್ರೀಂ ಕೋರ್ಟ್ ಕೂಡ ಪ್ರಾಸಿಕ್ಯೂಷನ್ಗೆ ಅನುಮತಿಸಿದ್ದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಭವಿಷ್ಯದ ಮೇಲೆ ಪರಿಣಾಮ ಬೀರಲಿದೆ.