ಬಹಿರ್ದೆಸೆಗೆ ತೆರಳಿದ್ದ ವ್ಯಕ್ತಿಯ ಮೇಲೆ ಬರೋಬ್ಬರಿ 13 ಅಡಿ ಉದ್ದದ ಬೃಹತ್ ಹೆಬ್ಬಾವು ದಾಳಿ ಮಾಡಿದ್ದು, ಆತನನ್ನು ನುಂಗಲು ಮುಂದಾಗಿದೆ.
ಈ ಘಟನೆ ಮಧ್ಯಪ್ರದೇಶ ರಾಜ್ಯದ ಜಬ್ಬಲಪುರ ಬಳಿಯ ಗ್ರಾಮದಲ್ಲಿ ನಡೆದಿದೆ. ಎಂದಿನಂತೆ ಸೋಮವಾರ ಬೆಳಗ್ಗೆ ಮಲವಿಸರ್ಜನೆಗೆಂದು ಕಾಡಿಗೆ ತೆರಳಿದ್ದ ವೇಳೆ ಹೆಬ್ಬಾವು ದಾಳಿ ಮಾಡಿದೆ.
ಬಹಿರ್ದೆಸೆಗೆ ತೆರಳಿ ವ್ಯಕ್ತಿ ಮರದ ಕೆಳಗೆ ಕುಳಿತಿದ್ದು, ಮರದ ಮೇಲಿಂದಲೇ ಆತನ ಮೇಲೆ ಹೆಬ್ಬಾವು ದಾಳಿ ಮಾಡಿದೆ. ಬಹಿರ್ದೆಸೆಗೆ ಕುಳಿತವನು ಮೇಲೇಳಲೂ ಸಾಧ್ಯವಾಗದಂತೆ ಆತನ ಕಾಲುಗಳನ್ನು ಸುತ್ತಿಕೊಂಡಿದೆ. ಕೂಡಲೇ ಆತ ಜೋರಾಗಿ ಸಹಾಯಕ್ಕಾಗಿ ಕೂಗಿಕೊಂಡಿದ್ದಾನೆ.
ವ್ಯಕ್ತಿಯ ಧ್ವನಿ ಕೇಳಿ ಸ್ಥಳಕ್ಕೆ ಬರುವಷ್ಟರಲ್ಲಿ ಆತನ ಕುತ್ತಿಗೆಗೂ ಹೆಬ್ಬಾವು ಸುತ್ತಿಕೊಂಡಿದೆ. ಒಂದಿಬ್ಬರಿಂದ ಹೆಬ್ಬಾವಿನ ಹಿಡಿತದಲ್ಲಿದ್ದ ವ್ಯಕ್ತಿಯನ್ನು ಬಿಡಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತು ಸಹಾಯಕ್ಕಾಗಿ ಇತರರನ್ನು ಕರೆದಿದ್ದಾರೆ.
ಹೆಬ್ಬಾವು ಬಹಿರ್ದೆಸೆಗೆ ಕುಳಿತಿದ್ದ ವ್ಯಕ್ತಿಯನ್ನು ಬಿಗಿಯಾಗಿ ಹಿಡಿದುಕೊಂಡು ತನ್ನ ಹಿಡಿತವನ್ನು ಮತ್ತಷ್ಟು ಬಿಗಿ ಮಾಡಲು ಮುಂದಾಗಿದೆ.ಹಾವಿನ ಹಿಡಿತದಿಂದ ವ್ಯಕ್ತಿಯನ್ನು ಕಾಪಾಡಲು ಹಾವಿನ ಮೇಲೆ ಹರಿತ ಆಯುಧಗಳಿಂದ ದಾಳಿ ಮಾಡಿದ್ದಾರೆ.
ಹಾವು ಕೊಡಲಿ ಏಟುಗಳನ್ನು ತಾಳಲಾರದೇ ಒದ್ದಾಡುತ್ತಾ ತನ್ನ ಹಿಡಿತವನ್ನು ಸಡಿಲಿಸಿದೆ. ಆಗ ಹಾವು ತಂತಾನೇ ಬಾಯೊಳಗೆ ನುಂಗಿದ್ದ ವ್ಯಕ್ತಿಯ ಕೈಯನ್ನು ಹೊರಗೆ ಉಗುಳಿದೆ. ಆಗ ಹಾವಿನ ದಾಳಿಗೊಳಗಾದ ವ್ಯಕ್ತಿ ಹಾವಿನಿಂದ ತಪ್ಪಿಸಿಕೊಂಡಿದ್ದಾರೆ.
.