Breaking:

ಹಾವು ಕಡಿದು 15 ವರ್ಷದ ಬಾಲಕಿ‌ ಮೃತ್ಯು

ಹಾವು ಕಡಿದು ವಿದ್ಯಾರ್ಥಿನಿ ಸಾವಿಗೀಡಾದ ಘಟನೆ  ಹೂವಿನಹಡಗಲಿ ತಾಲ್ಲೂಕಿನ ಹೊನ್ನನಾಯಕನಹಳ್ಳಿಯಲ್ಲಿ ನಡೆದಿದೆ.

ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಜಹಿರಾಬೀ ಹಾರೋಗೇರಿ (15) ಮೃತ ವಿದ್ಯಾರ್ಥಿನಿ.

ಬಾಲಕಿ ತನ್ನ ತಾಯಿಯೊಂದಿಗೆ ಹೊಲಕ್ಕೆ ಹೋಗಿದ್ದ ವೇಳೆ ಹಾವು ಕಡಿದಿದೆ. ತಕ್ಷಣ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಬಾಲಕಿಯನ್ನು ಕರೆ ತಂದು ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಗದಗ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಬಾಲಕಿ ಮೃತಪಟ್ಟಿದ್ದಾಳೆ.

ಈ ಕುರಿತು ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this article

ಟಾಪ್ ನ್ಯೂಸ್