ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತ ಜೆಡಿಎಸ್ ಎಂಎಲ್‌ಸಿ ಸೂರಜ್ ರೇವಣ್ಣ ಅವರು ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ನೀಡಿದ ಬಳಿಕ ಜೈಲಿನಿಂದ ಹೊರ ಬಂದಿದ್ದಾರೆ.
ಬಳಿಕ ಸೂರಜ್ ರೇವಣ್ಣ ಮಾಧ್ಯಮಗಳ ಜೊತೆಗೆ ಮಾತನಾಡಿದ್ದು, ಕುಟುಂಬದ ವಿರುದ್ಧ ಷಡ್ಯಂತ್ರ ಮಾಡಿ ತೇಜೋವಧೆ ಮಾಡಿದ್ದಾರೆ. ತೇಜೋವಧೆ ಮಾಡುವ ದುರುದ್ದೇಶದಿಂದ ಕೇಸ್ ದಾಖಲಿಸಿದ್ದಾರೆ. ನಾವು ಯಾವುದಕ್ಕೂ ಹೆದರಿಕೊಂಡು ಎಲ್ಲಿಗೂ ಓಡಿ ಹೋಗಲ್ಲ.ಎರಡು ಮೂರು ದಿನದಲ್ಲಿ ಎಲ್ಲದಕ್ಕೂ ಸ್ಪಷ್ಟನೆ ಕೊಡುತ್ತೇನೆ. ತನಿಖಾಧಿಕಾರಿಗಳಿಗೆ ಸಹಕಾರ ನೀಡಿದ್ದೇನೆ. ಕಾನೂನು ನ್ಯಾಯಾಂಗದ ಮೇಲೆ ಸಂಪೂರ್ಣ ವಿಶ್ವಾಸವಿದೆ ಎಂದು ಹೇಳಿದ್ದಾರೆ.
ನಮ್ಮ ಕುಟುಂಬ ಮತ್ತು ಹಾಸನ ಜಿಲ್ಲೆಯ ರಾಜಕಾರಣವನ್ನ ಕುಸಿತಗೊಳಿಸಬೇಕು ಅಂದುಕೊಂಡಿದ್ದಾರೆ. ಯಾರು ಎಂಬುವ ಬಗ್ಗೆ ಎಲ್ಲದಕ್ಕೂ ಸದ್ಯದಲ್ಲೇ ಉತ್ತರವನ್ನ ಕೊಡುತ್ತೇನೆ. ಇದು ಕೇಸ್ ಅಲ್ಲ, ಷಡ್ಯಂತರ ಹಾಗೂ ಕುತಂತ್ರ. ಶಿವಕುಮಾರ್ ಆಪ್ತ ಸಹಾಯಕನಲ್ಲ, ಕಾರು ಚಾಲಕನೂ ಅಲ್ಲ. ನನಗೆ ಲೋಕೇಶ್ ಅಂತ ಒಬ್ಬನೇ ಕಾರು ಚಾಲಕ ಇದ್ದಾನೆ ಎಂದು ಹೇಳಿದ್ದಾರೆ.