Breaking:

ಗಾಝಾದಲ್ಲಿ ಕದನ ವಿರಾಮಕ್ಕೆ ಬೆಂಬಲ ಪುನರುಚ್ಚರಿಸಿದ ಭಾರತ

ಭಾರತವು ಗಾಝಾದಲ್ಲಿ ತಕ್ಷಣದ ಮತ್ತು ಸಂಪೂರ್ಣ ಕದನ ವಿರಾಮದ ಕರೆಯನ್ನು ಬುಧವಾರ ವಿಶ್ವಸಂಸ್ಥೆಯಲ್ಲಿ ಪುನರುಚ್ಚರಿಸಿದ್ದು, ಹಮಾಸ್ ವಶದಲ್ಲಿರುವ ಎಲ್ಲ ಒತ್ತೆಯಾಳುಗಳ ಬಿಡುಗಡೆಗೆ ಆಗ್ರಹಿಸಿದೆ.

ಬುಧವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಮಧ್ಯಪ್ರಾಚ್ಯ ಕುರಿತು ಮುಕ್ತ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ವಿಶ್ವಸಂಸ್ಥೆಗೆ ಭಾರತದ ಉಪ ಪ್ರತಿನಿಧಿ ಆರ್.ರವೀಂದ್ರ ಅವರು, ‘2023,ಅ.7ರಂದು ಇಸ್ರೇಲ್ ಮೇಲಿನ ಹಮಾಸ್ ದಾಳಿಯನ್ನು ಬಲವಾಗಿ ಮತ್ತು ನಿಸ್ಸಂದಿಗ್ಧವಾಗಿ ಖಂಡಿಸಿದ ದೇಶಗಳಲ್ಲಿ ಭಾರತವೂ ಒಂದಾಗಿದೆ ಎಂದು ಹೇಳಿದ್ದಾರೆ.
ಇಸ್ರೇಲ್-ಹಮಾಸ್ ಸಂಘರ್ಷದ ವೇಳೆ ನಾಗರಿಕರ ಜೀವಹಾನಿಯನ್ನೂ ನಾವು ಖಂಡಿಸಿದ್ದೇವೆ. ಸಂಯಮವನ್ನು ಕಾಯ್ದುಕೊಳ್ಳುವಂತೆ, ಸಂಘರ್ಷವನ್ನು ತಿಳಿಗೊಳಿಸುವಂತೆ ನಾವು ಕರೆ ನೀಡಿದ್ದೇವೆ ಎಂದು ಹೇಳಿದ್ದಾರೆ.

ಕಳೆದ ವರ್ಷದ ಅಕ್ಟೋಬರ್‌ನಿಂದ ಇಸ್ರೇಲ್ ಗಾಝಾದ ವಿರುದ್ಧ ತೀವ್ರ ವಾಯು ಮತ್ತು ಭೂದಾಳಿಗಳನ್ನು ನಡೆಸುತ್ತಿದ್ದು, 15,000ಕ್ಕೂ ಅಧಿಕ ಮಕ್ಕಳು ಸೇರಿದಂತೆ ಕನಿಷ್ಠ 39,289 ಜನರು ಬಲಿಯಾಗಿದ್ದಾರೆ.

 

 

 

Share this article

ಟಾಪ್ ನ್ಯೂಸ್