ಸುಳ್ಯ; ಕಾರು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರು ಚಾಲಕ ಮೃತಪಟ್ಟ ಘಟನೆ ಸಂಪಾಜೆ ಗ್ರಾಮದ ದೊಡ್ಡಡ್ಕ ಸಮೀಪ ನಡೆದಿದೆ.
ವಿರಾಜಪೇಟೆಯ ಗಣೇಶ್(64)ಮೃತಪಟ್ಟವರು. ಇವರು ತಮ್ಮ ಮಗನನ್ನು ಮಂಗಳೂರಿನ ಏರ್‌ಪೋರ್ಟ್‌ಗೆ ಬಿಟ್ಟು ಬರುತ್ತಿದ್ದಾಗ ಅಪಘಾತ ಸಂಭವಿಸಿದೆ.
ತಕ್ಷಣ ಅವರನ್ನು ಸುಳ್ಯದ ಆಸ್ಪತ್ರೆಗೆ ಸೇರಿಸಲಾಗಿದೆ. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟರೆಂದು ತಿಳಿದು ಬಂದಿದೆ. ಕಾರಿನಲ್ಲಿದ್ದ ಮಗಳು,ಅಳಿಯ ಮತ್ತು ಇನ್ನೋರ್ವ ಪ್ರಯಾಣಿಕರಿಗೆ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.