Breaking:

ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಆಟವಾಡುತ್ತಿದ್ದ ಬಾಲಕ ವಿದ್ಯುತ್ ಶಾಕ್ ಹೊಡೆದು ಮೃತ್ಯು

ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಆಟವಾಡುತ್ತಿದ್ದಾಗ ಕಂಬದಿಂದ ವಿದ್ಯುತ್ ಶಾಕ್ ಹೊಡೆದು ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಶಿರಾ ತಾಲ್ಲೂಕಿನ ಬುಕ್ಕಾಪಟ್ಟಣ ಹೋಬಳಿಯ ಹೆಚ್.ಕಾವಲ್ ಗ್ರಾಮದಲ್ಲಿ ನಡೆದಿದೆ.

ಹೇಮಂತ್ (8) ಮೃತ ವಿದ್ಯಾರ್ಥಿ.ಹೆಚ್. ಕಾವಲ್ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 2ನೇ ತರಗತಿ ಓದುತ್ತಿದ್ದ ಹೇಮಂತ್ ಇಂದು ಸ್ವಾತಂತ್ರ್ಯ ದಿನಾಚರಣೆ ಮುಗಿಸಿ ಆಟವಾಡುವಾಗ ವಿದ್ಯುತ್ ಕಂಬದಿಂದ ಗಯಾ ವೈರ್​ಗೆ ವಿದ್ಯುತ್ ಪ್ರವಹಿಸಿ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ.

ಹಲವು ಬಾರಿ ವಿದ್ಯುತ್ ಕಂಬ ಸರಿಪಡಿಸುವಂತೆ ಕೆಇಬಿ ಅಧಿಕಾರಿಗಳಿಗೆ ಗ್ರಾಮಸ್ಥರ ಮನವಿ ಮಾಡಿದ್ದರು ಕೆಇಬಿ ಇಲಾಖೆ ನಿರ್ಲಕ್ಷ್ಯ, ಬೇಜಾವ್ದಾರಿಗೆ ವಿದ್ಯಾರ್ಥಿ ಹೇಮಂತ್ ಸಾವನ್ನಪ್ಪಿದ್ದಾನೆ ಎಂದು ಗ್ರಾಮಸ್ಥರು ಗಂಭೀರ ಆರೋಪ ಮಾಡಿದ್ದಾರೆ.

Share this article

ಟಾಪ್ ನ್ಯೂಸ್