Breaking:

ಉಡುಪಿ; ಮುಸುಕುಧಾರಿಗಳಿಂದ ಪ್ಲ್ಯಾಟ್ ಗೆ ನುಗ್ಗಲು ಯತ್ನ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ನಾಲ್ವರು ಮುಸುಕುಧಾರಿಗಳು ಫ್ಲ್ಯಾಟ್ ವೊಂದಕ್ಕೆ ನುಗ್ಗಲು ಯತ್ನಿಸಿ, ವಿಫಲರಾಗಿ ವಾಪಾಸ್ಸಾಗಿರುವ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ಗುರುವಾರ ಮುಂಜಾನೆ ನಡೆದಿದೆ.

ಮುಸುಕುಧಾರಿಗಳು ಬಂದಿರುವುದು ಅಪಾರ್ಟ್ ಮೆಂಟ್ ನ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ನಾಲ್ವರು ಮುಸುಕುಧಾರಿಗಳು ರಾಡ್ ಗಳನ್ನು ಹಿಡಿದು ಶಸ್ತ್ರಸಜ್ಜಿತವಾಗಿ ಅಪಾರ್ಟ್ ಮೆಂಟ್ ಗೆ ನುಗ್ಗಲು ಯತ್ನಿಸಿದ್ದಾರೆ. ಅಪರಿಚಿತರು ಪ್ಲ್ಯಾಟ್ ಗೆ ಪ್ರವೇಶಿಸಲು ವಿಫಲರಾಗಿ ಸ್ಥಳದಿಂದ ಹಿಂದಿರುಗಿರುವುದು ಸಿಸಿಟಿವಿ ದೃಶ್ಯದಲ್ಲಿ ಕಂಡುಬಂದಿದೆ.

ಮುಸುಕುಧಾರಿಗಳು ಒಳನುಗ್ಗಲು ಯತ್ನಿಸಿದ್ದ ಫ್ಲ್ಯಾಟ್ ನಲ್ಲಿ ವಯಸ್ಸಾದ ದಂಪತಿ ವಾಸಿಸುತ್ತಿದ್ದರು. ಈ ದಂಪತಿ ಒಂದು ವಾರದ ಹಿಂದೆ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ದರೋಡೆ ಮಾಡುವ ಉದ್ದೇಶದಿಂದ ಗ್ಯಾಂಗ್ ಕಾರ್ಯಪ್ರವೃತ್ತರಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.

Share this article

ಟಾಪ್ ನ್ಯೂಸ್