Breaking:

ಉಡುಪಿ: ತಾಯಿ ಮಕ್ಕಳ ಕೊಲೆ ಪ್ರಕರಣ, ಆರೋಪಿಯ ವಿಚಾರಣೆಗಿದ್ದ ತಡೆಯಾಜ್ಞೆ ತೆರವು

ಉಡುಪಿಯ ನೇಜಾರಿನಲ್ಲಿ ನಡೆದಿದ್ದ ತಾಯಿ ಮತ್ತು ಮಕ್ಕಳ ಕೊಲೆ ಪ್ರಕರಣದ ವಿಚಾರಣೆಗೆ ನೀಡಿದ ತಡೆಯಾಜ್ಞೆಯನ್ನು ತೆರವುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ‌‌.

ಇದಲ್ಲದೆ ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯನ್ನು ಮುಂದುವರೆಸಲು ಅನುಮತಿ ನೀಡಿದೆ.

ಬೆದರಿಕೆಯ ಹಿನ್ನೆಲೆಯಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯಕ್ಕೆ ವರ್ಗಾ ಯಿಸುವಂತೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಗೆ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದನು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು.

ಈ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಪ್ರಕರಣದ ದೂರುದಾರೆ ಹೈಕೋರ್ಟ್‌ಗೆ ಅರ್ಜಿಯನ್ನು ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಮುಹಮ್ಮದ್ ನವಾಝ್, ತಡೆಯಾಜ್ಞೆಯನ್ನು ತೆರವುಗೊಳಿಸಿ ವಿಚಾರಣೆಯನ್ನು ಮುಂದುವರಿಸಲು ಉಡುಪಿ ಜಿಲ್ಲಾ ನ್ಯಾಯಾ ಲಯಕ್ಕೆ ಅನುಮತಿ ನೀಡಿದ್ದಾರೆ.

Share this article

ಟಾಪ್ ನ್ಯೂಸ್