ಉಡುಪಿ: ಖಾಸಗಿ ಬಸ್‌ಗಳೆರಡರ ನಡುವೆ ಅಪಘಾತ ಸಂಭವಿಸಿ ಹಲವು ಮಂದಿ ಗಾಯಗೊಂಡ ಘಟನೆ ಮುಂಜಾನೆ ಇಂದ್ರಾಳಿಯಲ್ಲಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ದುರ್ಗಾಂಬಾ ಬಸ್, ಅಂಬಾಜಿ ಬಸ್‌ನ ಹಿಂಬದಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.
ದುರ್ಗಾಂಬ ಬಸ್‌ನ ಚಾಲಕ ಮತ್ತು ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.
ಈ ಕುರಿತು ಮಣಿಪಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.