Breaking:

ಉಡುಪಿ; ಕಾಲೇಜು ಪಕ್ಕದ ಬಾವಿಯಲ್ಲಿ ಪಿಯುಸಿ ವಿದ್ಯಾರ್ಥಿಯ ಮೃತದೇಹ ಪತ್ತೆ

ಕ್ಷುಲ್ಲಕ ಕಾರಣಕ್ಕೆ ಮನೆಬಿಟ್ಟು ಹೋಗಿ ನಾಪತ್ತೆಯಾಗಿದ್ದ ವಿದ್ಯಾರ್ಥಿಯ ಶವ ಬಾವಿಯೊಂದರಲ್ಲಿ ಪತ್ತೆಯಾದ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ನಡೆದಿದೆ.

ಹಿರಿಯಡಕ ಅಂಜಾರು ಪೊಲೀಸ್ ಠಾಣೆಯ ಕ್ವಾಟ್ರಸ್ ಬಳಿಯ ನಿವಾಸಿ ಪ್ರಥಮೇಶ್ (16) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯಲ್ಲಿ ಮೃತ ವಿದ್ಯಾರ್ಥಿ ಶವ ಸಿಕ್ಕಿದೆ.

ಪ್ರಥಮೇಶ್ ಹಿರಿಯಡಕ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸೋಮವಾರ ಮೊಬೈಲ್ ಕೊಡದಿದ್ದಕ್ಕೆ ಜಗಳವಾಡಿ ಆತ ಮನೆಬಿಟ್ಟು ಹೋಗಿದ್ದನು. ಬಳಿಕ ಮನೆಯವರು ಹಾಗೂ ಸ್ನೇಹಿತರು ಎಷ್ಟೇ ಹುಡುಕಾಟ ನಡೆಸಿದರೂ ಸಿಕ್ಕಿರಲಿಲ್ಲ. ಮಂಗಳವಾರ ಬೆಳಿಗ್ಗೆ ಹಿರಿಯಡಕ ಪ್ರಥಮ ದರ್ಜೆ ಕಾಲೇಜಿನ ಹಿಂಬದಿಯ ಬಾವಿಯೊಂದರಲ್ಲಿ ಪ್ರಥಮೇಶ್ ಮೃತದೇಹ ಪತ್ತೆಯಾಗಿದೆ.

ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this article

ಟಾಪ್ ನ್ಯೂಸ್