ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ದೇಶಾದ್ಯಂತ ತನ್ನ ಹಲವು ಶಾಖೆಗಳಲ್ಲಿ 500 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಗಸ್ಟ್ 28ರಿಂದ ಅರ್ಜಿ ಸಲ್ಲಿಕೆ ಪ್ರಾರಂಭವಾಗಿದ್ದು, ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 17ರೊಳಗೆ ಅರ್ಜಿ ಸಲ್ಲಿಸಬಹುದು.
ಕರ್ನಾಟಕದಲ್ಲಿ 40 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ.
ಅಭ್ಯರ್ಥಿಗಳು ತಮ್ಮ ರಾಜ್ಯದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಾತ್ರ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಅರ್ಹತಾ ಮಾನದಂಡಗಳನ್ನು ಸಂಪೂರ್ಣ ಪರಿಶೀಲಿಸಲು ಯುಬಿಐ ಬ್ಯಾಂಕ್ ಅಭ್ಯರ್ಥಿಗಳಿಗೆ ಸಲಹೆ ನೀಡಿದೆ.
ಅರ್ಜಿ ಸಲ್ಲಿಕೆಗೆ 2024ರ ಆಗಸ್ಟ್ 1ಕ್ಕೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ ತುಂಬಿರಬೇಕು. ಅಂದರೆ 1996ರ ಆಗಸ್ಟ್ 2 ಮತ್ತು 2004ರ ಆಗಸ್ಟ್ 1ರ ನಡುವೆ ಜನಿಸಿದವರು ಅರ್ಜಿ ಸಲ್ಲಿಸಲು ಅರ್ಹರು. ಕೇಂದ್ರ ಸರ್ಕಾರದ ಪ್ರಕಾರ SC/ST/OBC/PWD ಇತ್ಯಾದಿ ವರ್ಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ.
ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆಯನ್ನು ಹೊಂದಿರಬೇಕು. ಯುಬಿಐ ಇ-ಮೇಲ್ ಮತ್ತು ಎಸ್‌ಎಂಎಸ್ ಮೂಲಕ ಪರೀಕ್ಷೆಗಳು, ಆಯ್ಕೆ ಮತ್ತು ಇತರ ವಿವರಗಳ ಬಗ್ಗೆ ಮಾಹಿತಿಯನ್ನು ಒದಗಿಸುತ್ತದೆ.
ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಅಪ್ರೆಂಟಿಸ್‌ಶಿಪ್ ಪೋರ್ಟಲ್‌ಗಳಾದ NAPS, NATSನಲ್ಲಿ ನೋಂದಾಯಿಸಿಕೊಳ್ಳಬೇಕು. NAPS, NATS ಪೋರ್ಟಲ್‌ನಲ್ಲಿ ನೋಂದಾಯಿಸಲಾದ ಅಭ್ಯರ್ಥಿಗಳು ಅಪ್ರೆಂಟಿಸ್‌ಶಿಪ್‌ಗಾಗಿ ಅರ್ಜಿ ಸಲ್ಲಿಸಬೇಕು.