Breaking:

ಉಪ್ಪಿನಂಗಡಿ; ಮೊಬೈಲ್ ಕಸಿದುಕೊಂಡ ತಾಯಿ, ಮನನೊಂದು ಆತ್ಮಹತ್ಯೆ ಮಾಡಿಕೊಂಡ ಬಾಲಕಿ

ಉಪ್ಪಿನಂಗಡಿ: 14ರ ಹರೆಯದ ಬಾಲಕಿ ತಾಯಿಯ ಮೇಲೆ ಮುನಿಸಿಕೊಂಡು ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ  ರಾತ್ರಿ ಸಂಭವಿಸಿದೆ.

ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಎಂಬಲ್ಲಿ ಕೃಷಿ ಕೂಲಿ ಕಾರ್ಮಿಕರಾಗಿ ಆಗಮಿಸಿದ್ದ ಜಾರ್ಖಂಡ್ ಮೂಲದ ಕುಟುಂಬದ ಬಾಲಕಿ ನೀಲಮ್‌ ಕುಮಾರ್ ಆತ್ಮಹತ್ಯೆ ಮಾಡಿಕೊಂಡ ಬಾಲಕಿ.

ಜಾರ್ಖಂಡ್ ನ‌ ಸರ್ಜು ಬುಯ್ಯಾನ್‌ ಪತ್ನಿ, ಮಗಳೊಂದಿಗೆ ವಾರದ ಹಿಂದೆ ಕರಾಯ ಗ್ರಾಮದ ಕೊಂಬೆಟ್ಟಿ ಮಾರು ಜಗದೀಶ್‌ ಸರಳಾಯ ಅವರ ತೋಟದ ಕೆಲಸಕ್ಕೆ ಆಗಮಿಸಿದ್ದರು. ರವಿವಾರ ರಾತ್ರಿ 7.30ರ ಸುಮಾರಿಗೆ ತೋಟದ ಮಾಲಕರು ಒದಗಿಸಿದ ವಾಸ್ತವ್ಯದ ಕೋಣೆಯಲ್ಲಿ ನೀಲಮ್‌ ಕುಮಾರಿಯು ಮೊಬೈಲ್‌ನಲ್ಲಿ ಸಂಬಂಧಿಕರೊಂದಿಗೆ ವೀಡಿಯೋ ಕರೆ ಮಾಡುತ್ತಿದ್ದುದ್ದನ್ನು ತಾಯಿ ಆಕ್ಷೇಪಿಸಿ ಮೊಬೈಲ್‌ ಕಿತ್ತುಕೊಂಡಿದ್ದರೆನ್ನಲಾಗಿದೆ. ಇದರಿಂದ ಕೋಪಿಸಿಕೊಂಡ ಬಾಲಕಿಯು ತೋಟದ ಮಾವಿನ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೈದಿರುತ್ತಾಳೆ ಎಂದು ತಂದೆ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

 ಈ ಕುರಿತು ಉಪ್ಪಿನಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share this article

ಟಾಪ್ ನ್ಯೂಸ್