ಉಪ್ಪಿನಂಗಡಿ: ಬೈಕ್ ಗಳೆರಡು ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರನೋರ್ವ ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ತುರ್ಕಳಿಕೆ ಎಂಬಲ್ಲಿ ನಿನ್ನೆ ರಾತ್ರಿ ಸಂಭವಿಸಿದೆ.
ಬೈಕ್ ಸವಾರ ಬಾರ್ಯ ನಿವಾಸಿ ಶಿವಾನಂದ ಮೃತ ದುರ್ದೈವಿ.
ಶಿವಾನಂದ ಅವರು ಸಹೋದರನ ಜೊತೆ ಕಲ್ಲೇರಿಯಿಂದ ಬಾರ್ಯದಲ್ಲಿರುವ ತಮ್ಮ ಮನೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಎದುರುಗಡೆಯಿಂದ ಬಂದ ಕರೀಂ ಎಂಬವರ ಬೈಕ್ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಶಿವಾನಂದ ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಗಂಭೀರವಾಗಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಸಾವನ್ನಪ್ಪಿದ್ದಾರೆ.
ಅಪಘಾತದಲ್ಲಿ ಧನಂಜಯ, ರವಿ, ಅಸ್ಮಾನ್ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಹಾಗೂ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.