Breaking:

BREAKING ಶಾಲಾ ಕೊಠಡಿಯಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಮುಖ್ಯ ಶಿಕ್ಷಕನ ಮೃತದೇಹ ಪತ್ತೆ

ಶಾಲೆಯ ಮುಖ್ಯೋಪಾಧ್ಯಾಯನೋರ್ವ ಶಾಲೆಯಲ್ಲೆ  ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಸಮೀಪದ ನಾಗೂರ ಗ್ರಾಮದಲ್ಲಿ ನಡೆದಿದೆ.

ಕನ್ನಡ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯೋಪಾಧ್ಯಾಯ ಸಿ ಎಸ್ ಹಡಪದ ಶಾಲೆಯ ಶಿಕ್ಷಕರ ಕೊಠಡಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಆತ್ಮಹತ್ಯೆಗೆ ನಿಖರ ಕರಣ ತಿಳಿದುಬಂದಿಲ್ಲ, ಘಟನೆಗೆ ಸರ್ಕಾರಿ ನೌಕರರ ಸಂಘ ಆಘಾತ ವ್ಯಕ್ತಪಡಿಸಿದೆ.

ನೌಕರರ ಸಂಘದ ಶಿವಾನಂದ ಮಂಗಾನವರ ಮಾತನಾಡಿ, ಶಿಕ್ಷಕನ ಸಾವಿನ ಬಗ್ಗೆ ಸಂಪೂರ್ಣ ತನಿಖೆಯಾಗಬೇಕು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದ್ದಾರೆ.

ಘಟನಾ ಸಂಬಂಧ ಬಸವನಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ‌.

Share this article

ಟಾಪ್ ನ್ಯೂಸ್