Breaking:

ಅನರ್ಹತೆ ಬೆನ್ನಲ್ಲೆ ಕುಸ್ತಿಗೆ ವಿದಾಯ ಹೇಳಿದ ವಿನೇಶ್ ಪೋಗಟ್: ಭಾವನಾತ್ಮಕ ಟ್ವೀಟ್..

ಒಲಿಂಪಿಕ್ಸ್ ನಲ್ಲಿ  ಫೈನಲ್ ಪ್ರವೇಶಿಸಿದರೂ ಕೇವಲ 100 ಗ್ರಾಂ ತೂಕ ಹೆಚ್ಚಳವಾದ ಕಾರಣ ಒಲಿಂಪಿಕ್ಸ್‌ನಿಂದ ಅನರ್ಹಗೊಂಡ ಕುಸ್ತಿಪಟು ವಿನೇಶ್‌ ಫೋಗಾಟ್‌  ಕುಸ್ತಿಗೆ ವಿದಾಯ ಹೇಳಿದ್ದಾರೆ. ತಾನು ಕುಸ್ತಿಗೆ ನಿವೃತ್ತಿ ಹೇಳುತ್ತಿದ್ದೇನೆ ಎಂದು ಫೋಗಾಟ್‌ ಭಾವನಾತ್ಮಕವಾಗಿ ಟ್ವೀಟ್‌ ಮಾಡಿದ್ದಾರೆ.

ಈ ಮೊದಲು 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದ ವಿನೇಶ್‌ ಈ ಬಾರಿ ಅವಕಾಶ ಸಿಗದ ಕಾರಣ 50 ಕೆಜಿ ವಿಭಾಗದಲ್ಲಿ ಸ್ಪರ್ಧೆಗೆ ಇಳಿದಿದ್ದರು. ಹೀಗಾಗಿ ಸ್ಪರ್ಧೆ ಆರಂಭವಾಗುವ ದಿನ ಬೆಳಿಗ್ಗೆ ನಡೆಸುವ ತೂಕ ಪರಿಶೀಲನೆಯಲ್ಲಿ ಸ್ಪರ್ಧಿ 50 ಅಥವಾ ಅದಕ್ಕಿಂತ ಕಡಿಮೆ ಭಾರ ಹೊಂದಿರಬೇಕು. ವಿನೇಶ್‌ ಅವರ ತೂಕ 50 ಕೆಜಿ, 100 ಗ್ರಾಂ ಇದ್ದ ಕಾರಣ ಅವರನ್ನು ಅನರ್ಹಗೊಳಿಸಲಾಯಿತು.

ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಭಗ್ನವಾಯಿತು. ನನ್ನ ಧೈರ್ಯ ಛಿದ್ರವಾಗಿದೆ. ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ. ನಿಮ್ಮೆಲ್ಲರ ಬೆಂಬಲಕ್ಕೆ ನಾನು ಸದಾ ಋಣಿ ಆಗಿರುತ್ತೇನೆ ಎಂದು ಭಾವನಾತ್ಮಕವಾಗಿ ವಿನೇಶ್‌ ಕುಸ್ತಿಗೆ ವಿದಾಯ ಹೇಳಿದ್ದಾರೆ.

 

ಇನ್ನು  ಪ್ಯಾರಿಸ್ ಕುಸ್ತಿಯಲ್ಲಿ ಅನರ್ಹತೆಯನ್ನು ಪ್ರಶ್ನಿಸಿ ವಿನೇಶ್‌ ಫೋಗಾಟ್‌ ಅಂತಾರಾಷ್ಟ್ರೀಯ ಮಧ್ಯವರ್ತಿ ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದಾರೆ.

Share this article

ಟಾಪ್ ನ್ಯೂಸ್