ಆಟೋ ಚಾಲಕರೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಶಿವಾಜಿನಗರದಲ್ಲಿ ನಡೆದಿದೆ.
ರಮೇಶ್ ಶಿವಾಜಿನಗರ(40) ಮೃತ ವ್ಯಕ್ತಿ. ಮೃತರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ರಮೇಶ್ ಆಟೋ ಚಾಲಕರಾಗಿದ್ದು, ಬಾಡಿಗೆ ಮನೆಯಲ್ಲಿ ವಾಸವಿದ್ದರು.
ಆರ್ಥಿಕ ಸಂಕಷ್ಟದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ.