Breaking:

ವಿಟ್ಲ; ದ್ವಿಚಕ್ರ ವಾಹನಕ್ಕೆ ಬಸ್ ಢಿಕ್ಕಿ; ಸ್ಕೂಟರ್ ಸವಾರನ ಸ್ಥಿತಿ ಗಂಭೀರ

ವಿಟ್ಲ; ಸ್ಕೂಟರ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಚನೆ ವಿಟ್ಲ-ಸಾಲೆತ್ತೂರು-ಮುಡಿಪು ರಸ್ತೆಯ ಕಟ್ಟತ್ತಿಲ ಎಂಬಲ್ಲಿ ನಡೆದಿದೆ.

ಘಟನೆಯಲ್ಲಿ ಮುಝಮ್ಮಿಲ್ ಎಂಬವರು ಗಾಯಗೊಂಡಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಟ್ಲದಿಂದ ಮುಡಿಪು ಕಡೆ ಸಂಚರಿಸುತ್ತಿದ್ದ ಖಾಸಗಿ ಬಸ್ ಹಾಗೂ ಮೆದು ಕಡೆ ತೆರಳುತ್ತಿದ್ದ ಮುಝಮ್ಮಿಲ್ ಅವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ.

Share this article

ಟಾಪ್ ನ್ಯೂಸ್