Breaking:

ವಕ್ಫ್‌ ತಿದ್ದುಪಡಿ ಮಸೂದೆಯನ್ನು ಸಮರ್ಥಿಸಿಕೊಂಡ ಕೇಂದ್ರ; ಜಂಟಿ ಸಂಸದೀಯ ಸಮಿತಿ ರಚನೆ

ವಕ್ಫ್‌ ತಿದ್ದುಪಡಿ ಮಸೂದೆಯನ್ನು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಗುರುವಾರ ಮಂಡಿಸಿದ್ದು, ಪ್ರತಿಪಕ್ಷಗಳು ಮಸೂದೆಗೆ ತೀವ್ರ ವಿರೋಧವನ್ನು ವ್ಯಕ್ತಪಡಿಸಿದೆ. ಈ ಬಗ್ಗೆ ಮಸೂದೆಯು ಮಸೀದಿಗಳ ಚಟುವಟಿಕೆಗಳಲ್ಲಿ ಹಸ್ತಕ್ಷೇಪ ಮಾಡುವ ಉದ್ದೇಶ ಹೊಂದಿಲ್ಲ ಎಂದು ಕೇಂದ್ರ ಸರ್ಕಾರ ಸಮರ್ಥಿಸಿಕೊಂಡಿದೆ.

ಮಸೂದೆಯು ಮುಸ್ಲಿಮರನ್ನು ಗುರಿಯಾಗಿಸಿಕೊಂಡಿದೆ, ಇದು ಸಂವಿಧಾನದ ಮೇಲಿನ ದಾಳಿ ಎಂದು ವಿರೋಧ ಪಕ್ಷಗಳು ಕಟುವಾಗಿ ಆರೋಪಿಸಿವೆ.

ಮಸೂದೆಯನ್ನು ಈಗ ಜಂಟಿ ಸಂಸದೀಯ ಸಮಿತಿಯ (ಜೆಪಿಸಿ) ಪರಿಶೀಲನೆಗೆ ಒಪ್ಪಿಸಲಾಗಿದೆ.

ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ಮಸೂದೆಯ ಮಂಡನೆಗೆ ಅವಕಾಶ ಕೋರಿದ ತಕ್ಷಣ, ‘ಇಂಡಿಯಾ’ ಸದಸ್ಯರು ವಿರೋಧ ವ್ಯಕ್ತಪಡಿಸಿದರು.

ಮಸೂದೆ ಮಂಡನೆಯನ್ನು ವಿರೋಧಿಸಲು ನೋಟಿಸ್ ನೀಡಿದ್ದ ಕಾಂಗ್ರೆಸ್ಸಿನ ಕೆ.ಸಿ. ವೇಣುಗೋಪಾಲ್ ಅವರು ಮುಂಬರುವ ವಿಧಾನಸಭಾ ಚುನಾವಣೆಗಳ ಮೇಲೆ ಕಣ್ಣಿಟ್ಟು ಮಸೂದೆಯನ್ನು ಮಂಡಿಸಲಾಗುತ್ತಿದೆ ಎಂದು ದೂರಿದರು.

ಸಂದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು ವಕ್ಫ್ (ತಿದ್ದುಪಡಿ) ಮಸೂದೆ, 2024 ಕುರಿತು ಚರ್ಚಿಸಲು ಜೆಪಿಸಿಯನ್ನು ರಚಿಸಲು ಲೋಕಸಭೆಯ 21 ಸಂಸದರ ಹೆಸರನ್ನು ಮುಂದಿಟ್ಟಿದ್ದಾರೆ. ಅದೇ ವೇಳೆ ಸಮಿತಿಗೆ 10 ಸದಸ್ಯರ ಹೆಸರನ್ನು ಶಿಫಾರಸು ಮಾಡುವಂತೆ ರಾಜ್ಯಸಭೆಗೆ ಕರೆ ನೀಡಿದ್ದಾರೆ.

Share this article

ಟಾಪ್ ನ್ಯೂಸ್