Breaking:

ವಕ್ಫ್ ಬೋರ್ಡ್ ಗೆ ಸಂಬಂಧಿಸಿದ ಒಟ್ಟು 62,830 ಸ್ಥಿರಾಸ್ತಿಗಳನ್ನು ದಾಖಲಿಸಲಾಗಿದೆ: ಬ್ರಿಜೇಶ್ ಚೌಟ ಪ್ರಶ್ನೆಗೆ ಸಚಿವರ ಉತ್ತರ

ಕರ್ನಾಟಕದಲ್ಲಿ ವಕ್ಫ್ ಬೋರ್ಡ್ ಗೆ ಸಂಬಂಧಿಸಿದ ಒಟ್ಟು 62,830 ಸ್ಥಿರಾಸ್ತಿಗಳನ್ನು ದಾಖಲಿಸಲಾಗಿದೆ ಎಂದು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ.

ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ದೇಶದಲ್ಲಿ ವಕ್ಫ್ ಮಂಡಳಿ ಹೊಂದಿರುವ ಒಟ್ಟು ಆಸ್ತಿಗಳ ವಿವರಗಳಿಗೆ ಸಂಬಂಧಿಸಿದಂತೆ ಕೇಳಿರುವ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಕಿರಣ್ ರಿಜಿಜು, ಭಾರತದ ವಕ್ಫ್ ಆಸ್ತಿ ನಿರ್ವಹಣಾ ವ್ಯವಸ್ಥೆಯ ಪೋರ್ಟಲ್ ( WAMASI) 2010ರಲ್ಲಿ ಪ್ರಾರಂಭವಾಗಿದೆ. ಪ್ರತಿ ತಿಂಗಳು ಈ ಪೋರ್ಟಲ್ ನಲ್ಲಿ ದೇಶದೆಲ್ಲೆಡೆಯಿರುವ ವಕ್ಫ್ ಆಸ್ತಿಗಳ ದಾಖಲೀಕರಣ ಮಾಡಲಾಗುತ್ತಿದೆ. ಇಲ್ಲಿವರೆಗೆ ದೇಶದಲ್ಲಿ ಒಟ್ಟು 8,72,320 ಸ್ಥಿರಾಸ್ತಿಗಳು ದಾಖಲೀಕರಣಗೊಂಡಿವೆ. ಈ ಪೈಕಿ ದಕ್ಷಿಣ ಕನ್ನಡ ಸೇರಿದಂತೆ ಕರ್ನಾಟಕದ ಒಟ್ಟು 62,830 ವಕ್ಫ್ ಸ್ಥಿರಾಸ್ತಿಗಳು ದಾಖಲೀಕರಣಗೊಂಡಿವೆ. ಕರ್ನಾಟಕದ ಒಟ್ಟು 32,844 ಆಸ್ತಿಗಳು WAMASI ಪೋರ್ಟಲ್ ನಲ್ಲಿ ಡಿಜಿಟಲೀಕರಣಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಅತಿಹೆಚ್ಚು ಅಂದರೆ 2,17,161 (ಸುನ್ನಿ) ಹಾಗೂ 15,386(ಶಿಯಾ)ದ ವಕ್ಫ್ ಸ್ಥಿರಾಸ್ತಿಗಳು ಉತ್ತರ ಪ್ರದೇಶದಲ್ಲಿ ದಾಖಲೀಕರಣಗೊಂಡಿವೆ. ಪಶ್ಚಿಮ ಬಂಗಾಲದಲ್ಲಿ 80,480, ಪಂಜಾಬ್ 75,955, ತಮಿಳುನಾಡಿನಲ್ಲಿ 66,092, ಕೇರಳದಲ್ಲಿ 53,278 ವಕ್ಫ್ ಮಂಡಳಿಯ ಸ್ಥಿರಾಸ್ತಿಗಳ ದಾಖಲೀಕರಣಗೊಂಡಿವೆ. ಕೇಂದ್ರಾಡಳಿತ ಪ್ರದೇಶ ಹೊರತುಪಡಿಸಿದಂತೆ ದೆಹಲಿ, ಮೇಘಾಲಯ, ಮಣಿಪುರ, ಮುಂತಾದ ರಾಜ್ಯಗಳಲ್ಲಿ ಅತಿಕಡಿಮೆ ಸಂಖ್ಯೆಯ ವಕ್ಫ್ ಆಸ್ತಿ ದಾಖಲೀಕರಣಗೊಂಡಿರುವುದಾಗಿ ಸಚಿವರು ಅಂಕಿ-ಅಂಶಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ.

Share this article

ಟಾಪ್ ನ್ಯೂಸ್