Breaking:

ವಯನಾಡು ಭೂಕುಸಿತದ ಸ್ಥಳದಲ್ಲಿ 16 ಗಂಟೆಯಲ್ಲಿ ಸೇತುವೆ ನಿರ್ಮಿಸಿದ ಸೇನೆ!

ವಯನಾಡಿನಲ್ಲಿ  ಭೂಕುಸಿತ ಸಂಭವಿಸಿದ್ದ ಚೂರಲ್ಮಲ ಮತ್ತು ಮುಂಡಕ್ಕೈಗೆ ಸಂರ್ಪಕ್ಕೆ ಕಲ್ಪಿಸುವ ಚಾರಲ್‌ಮಲೈ ನದಿಗೆ ಅಡ್ಡಲಾಗಿ 190 ಅಡಿ ಉದ್ದದ ಸೇತುವೆಯನ್ನು ಭಾರತೀಯ ಸೇನೆ ದಾಖಲೆಯ ಕೇವಲ 16 ಗಂಟೆಯಲ್ಲಿ  ನಿರ್ಮಿಸಿದೆ.

ಸೇನೆಯು  ಜುಲೈ 31ರ ರಾತ್ರಿ 9 ಗಂಟೆಗೆ  ಸೇತುವೆ ನಿರ್ಮಾಣ ಪ್ರಾರಂಭಿಸಿದ್ದು,  ಸೇನೆಯ ಎಂಜಿನಿಯರ್‌ಗಳು ಆಗಸ್ಟ್ 01 ರ ಸಂಜೆ 5:30ಕ್ಕೆ ಕೆಲಸ ಪೂರ್ಣಗೊಳಿಸಿದ್ದಾರೆ.

ಈ ಸೇತುವೆ 24 ಟನ್‌ ತೂಕದ ಸಾಮರ್ಥ್ಯವನ್ನು ಹೊಂದಿದೆ.  ಮದ್ರಾಸ್ ಎಂಜಿನಿಯರ್ಸ್ ಗ್ರೂಪ್‌ನ ಮೇಜ್ ಸೀತಾ ಶೆಲ್ಕೆ ಮತ್ತು ಅವರ ತಂಡ ಈ ಸೇತುವೆಯನ್ನು ನಿರ್ಮಿಸಿದೆ.

ಬೈಲಿ ಸೇತುವೆಯು ತಾತ್ಕಾಲಿಕ ಸೇತುವೆಯಾಗಿದ್ದು ಉಕ್ಕಿನ ತುಂಡುಗಳನ್ನು ಜೋಡಿಸಿ ನಿರ್ಮಾಣ ಮಾಡಲಾಗಿದೆ. ಸೇತುವೆ ನಿರ್ಮಾಣಗೊಂಡ ಬಳಿಕ ರಕ್ಷಣಾ ಕಾರ್ಯಾಚರಣೆ ಬಿರುಸು ಪಡೆದಿದೆ. ಜೆಸಿಬಿಗಳು, ಅಂಬುಲೆನ್ಸ್‌ಗಳು, ರಕ್ಷಣಾ ಪಡೆ ಎಲ್ಲವೂ ಈ ಸೇತುವೆಯ ಮೂಲಕವೇ ಸಾಗುತ್ತಿದೆ‌.

ಸೇನೆಯು ಈ ಸೇತುವೆ ನಿರ್ಮಾಣವನ್ನು ಮಧ್ಯಾಹ್ನ 12 ಗಂಟೆಯ ಒಳಗಡೆ ಪೂರ್ಣಗೊಳಿಸಲು  ಟಾರ್ಗೆಟ್‌ ಹಾಕಿಕೊಂಡಿತ್ತು. ಆದರೆ ಭಾರೀ ಮಳೆಯಿಂದ ಕೆಲಸಕ್ಕೆ ಅಡ್ಡಿಯಾಗಿದ್ದರೂ ಸೇನೆಯು ಕಾರ್ಯಚರಣೆ ಮಾಡಿತ್ತು.

Share this article

ಟಾಪ್ ನ್ಯೂಸ್