Breaking:

ವಯನಾಡು ಭೂಕುಸಿತದ ಸಂತ್ರಸ್ತರಿಗೆ ಪರಿಹಾರ ಘೋಷಿಸಿದ ಸಿಎಂ ಪಿಣರಾಯ್ ವಿಜಯನ್

ವಯನಾಡ್ ಭೂಕುಸಿತ ದುರಂತದಲ್ಲಿ ಮೃತರ ಕುಟುಂಬಕ್ಕೆ ತಲಾ ಆರು ಲಕ್ಷ ರೂಪಾಯಿ ಪರಿಹಾರವನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು  ಘೋಷಿಸಿದ್ದಾರೆ.

ವಯನಾಡ್ ಭೂಕುಸಿತದಿಂದಾಗಿ ಕನಿಷ್ಠ 400ಕ್ಕೂ ಅಧಿಕ ಜನರು ಮೃತಪಟ್ಟಿದ್ದರು. 4 ಲಕ್ಷ ರೂ.ಗಳಲ್ಲಿ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಮತ್ತು ಉಳಿದ 2 ಲಕ್ಷ ರೂ.ಗಳನ್ನು ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ ನೀಡಲಾಗುತ್ತದೆ ಎಂದು ಪಿಣರಾಯಿ ವಿಜಯನ್ ಹೇಳಿದ್ದಾರೆ.

ಭೂಕುಸಿತದಲ್ಲಿ ಕಣ್ಣು ಮತ್ತು ಕೈಕಾಲುಗಳನ್ನು ಕಳೆದುಕೊಂಡ ಅಥವಾ ಶೇ.60ರಷ್ಟು ಅಂಗವೈಕಲ್ಯಕ್ಕೆ ಒಳಗಾದವರಿಗೆ ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಯಿಂದ 75,000 ರೂಪಾಯಿಗಳನ್ನು ನೀಡಲಾಗುವುದು ಎಂದು ಪಿಣರಾಯ್ ವಿಜಯನ್ ಹೇಳಿದ್ದಾರೆ.

Share this article

ಟಾಪ್ ನ್ಯೂಸ್