ವಯನಾಡಿನ ಭೀಕರ ಭೂಕುಸಿತದಲ್ಲಿ ಮೃತರ ಸಂಖ್ಯೆ 330ಕ್ಕೆ ಏರಿಕೆಯಾಗಿದೆ. ಇನ್ನು ಕೂಡ 300 ಜನ ನಾಪತ್ತೆಯಾಗಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಈ ಮಧ್ಯೆ ಮಾತನಾಡಿದ ಕೇರಳ ಸಿಎಂ ಪಿಣರಾಯ್ ವಿಜಯನ್ ಭೂಮಿ ಕುಸಿದು ಮೂರು ದಿನಗಳು ಕಳೆಯುತ್ತಿದ್ದು ಈಗಾಗಲೇ ಸಾವಿನಸಂಖ್ಯೆ 300ರ ಗಡಿ ದಾಟಿದೆ. ಹೀಗಾಗಿ ಆ ಪ್ರದೇಶಗಳಲ್ಲಿ ನಾಪತ್ತೆಯಾಗಿರುವವರು ಜೀವಂತವಾಗಿರುವ ಸಾಧ್ಯತೆ ಕಡಿಮೆ ಎಂದು ಹೇಳಿದ್ದಾರೆ.
ಮುಂಡಕ್ಕೈ, ಚೂರಲ್ ಮಾಲಾ ಮತ್ತು ಅಟ್ಟಮಾಲ ಪ್ರದೇಶಗಳಲ್ಲಿ ಕಾಪಾಡಬೇಕು ಎಂದರೆ ಬದುಕಿದವರು ಯಾರು ಇಲ್ಲ. ಮುಂಡಕ್ಕೈನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಮತ್ತು ಚೂರಲ್ ಮಾಲಾದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ 29 ವಿದ್ಯಾರ್ಥಿಗಳು ಕಾಣೆಯಾಗಿದ್ದಾರೆ. ನಾಪತ್ತೆಯಾದವರು ಬದುಕುಳಿದಿರುವ ಸಾಧ್ಯತೆ ತೀವ್ರ ಕಡಿಮೆಯಾಗಿದೆ ಎಂದು ಸಿಎಂ ಹೇಳಿದ್ದಾರೆ.
ಭೂಕುಸಿತದಿಂದ ವಯನಾಡಿನಲ್ಲಿ ಮೃತಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಕ್ಷಣಾ ಪಡೆಗಳು ಹುಡುಕುವಾಗ ಕೆಸರಿನಲ್ಲಿ ಮನುಷ್ಯ ದೇಹದ ಭಾಗಗಳು ಸಿಗುತ್ತಿವೆ. ವಯನಾಡಿಗೆ ಸೇರಿದ ಮೂರು ಗ್ರಾಮಗಳಲ್ಲಿ ದಿನದಿಂದ ದಿನಕ್ಕೆ ಆಘಾತಕಾರಿ ಚಿತ್ರಗಳು ಕಂಡು ಬರುತ್ತಿದೆ.