ವಯನಾಡಿನಲ್ಲಿ ಸಂಭವಿಸಿದ ಭೀಕರ ದುರಂತದಲ್ಲಿ ಮೃತರ ಮೃತರ ಸಂಖ್ಯೆ 276ಕ್ಕೆ ಏರಿಕೆಯಾಗಿದೆ. ಇನ್ನು ಕೂಡ 200 ಮಂದಿ ನಾಪತ್ತೆಯಾಗಿದ್ದು, 1,592 ಜನರನ್ನು ರಕ್ಷಣೆ ಮಾಡಲಾಗಿದೆ.
ಸ್ಥಳದಲ್ಲಿ 1,592 ಜನರನ್ನು ರಕ್ಷಿಸಿ, ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. 8 ಸಾವಿರಕ್ಕೂ ಹೆಚ್ಚು ಜನರನ್ನು ಸಾಂತ್ವನ ಕೇಂದ್ರಕ್ಕೆ ಸ್ಥಾಳಂತರಿಸಲಾಗಿದೆ. 3,332 ಪುರುಷರು ಹಾಗೂ 3398 ಮಂದಿ ಮಹಿಳೆಯರನ್ನು ರಕ್ಷಣೆ ಮಾಡಲಾಗಿದೆ. 82 ನಿರಾಶ್ರಿತರ ಶಿಬಿರವನ್ನು ತೆರೆಯಲಾಗಿದೆ. 8 ಕ್ಯಾಂಪ್ ನ್ನು ಚೋರ್ ಮಂಡಲಾದಲ್ಲಿ ಓಪನ್ ಮಾಡಲಾಗಿದೆ.
ಈವರೆಗೆ 1884 ಮಕ್ಕಳನ್ನು ರಕ್ಷಿಸಲಾಗಿದ್ದು, ಅವರನ್ನು ಕಾಳಜಿ ಕೇಂದ್ರಗಳಲ್ಲಿ ಇರಿಸಲಾಗಿದೆ. ಗುಡ್ಡ ಕುಸಿತದಲ್ಲಿ ಸಂತ್ರಸ್ತರಾದಂತವರಿಗೆ ಅಗತ್ಯ ಸಾಮಗ್ರಿಗಳನ್ನು ಒದಗಿಸುವಂತಹ ವ್ಯವಸ್ಥೆಯನ್ನು ಕೂಡ ಮಾಡಲಾಗುತ್ತಿದೆ.