Breaking:

ವಯನಾಡು ಭೂಕುಸಿತ; ನೂರಾರು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ ಇದೆ; ಸಿಎಂ ಕಚೇರಿಯಿಂದ ಮಹತ್ವದ ಮಾಹಿತಿ

ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡಿ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಈಗಾಗಲೇ 35ಕ್ಕೂ ಅಧಿಕ ಮೃತದೇಹವನ್ನು ಹೊರತೆಗೆಯಲಾಗಿದ್ದು, ನೂರಾರು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಬಗ್ಗೆ ಮಾತನಾಡಿದ ಸಿಎಂ ಪಿಣರಾಯ್ ವಿಜಯನ್, ಎಲ್ಲಾ ರಕ್ಷಣಾ ಪಡೆಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ ಎಂದು  ಹೇಳಿದ್ದಾರೆ.

ಕಾರ್ಯಾಚರಣೆಯನ್ನು ತ್ವರಿತಗೊಳಿಸಲು ಹಾಗೂ ಅಲ್ಲಿನ ಪರಿಸ್ಥಿತಿಯನ್ನು ಪರಿಶೀಲಿಸಲು ಸಚಿವರು ವಯನಾಡಿಗೆ ತೆರಳಲಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಅವಘಡಗಳಿಗೆ ಸಂಬಂಧಿಸಿದಂತೆ ರಾಜ್ಯ ಆರೋಗ್ಯ ಇಲಾಖೆಯು ತುರ್ತು ಸಹಾಯವಾಣಿವನ್ನು ಆರಂಭಿಸಿದೆ. ಅಗ್ನಿಶಾಮಕ ದಳ ಮತ್ತು ಎನ್‌ಡಿಆರ್‌ಎಫ್ ತಂಡಗಳು ಭೂಕುಸಿತ ಸಂಭವಿಸಿದ ಪ್ರದೇಶಕ್ಕೆ ತೆರಳಿದೆ. ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ವಯನಾಡ್‌ಗೆ ತೆರಳುತ್ತಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ತಿಳಿಸಿದೆ.

Share this article

ಟಾಪ್ ನ್ಯೂಸ್