ಭೀಕರ ದುರಂತ ಸಂಭವಿಸಿರುವ ಕೇರಳದ ವಯನಾಡು ಜಿಲ್ಲೆಯಲ್ಲಿ ಕಾಂಗ್ರೆಸ್ ವತಿಯಿಂದ ಈ ವರ್ಷ 100ಕ್ಕೂ ಹೆಚ್ಚು ಮನೆಗಳನ್ನು ನಿರ್ಮಿಸುವುದಾಗಿ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
ವಯನಾಡ್ ನ ಸಂಸದರಾಗಿರುವ ರಾಹುಲ್ ಗಾಂಧಿ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ನಿನ್ನೆ ಭೇಟಿ ನೀಡಿದ್ದಾರೆ. ಆ ಬಳಿಕ ಪರಿಹಾರ ಶಿಬಿರಗಳಿಗೆ ಕೂಡ ಭೇಟಿ ನೀಡಿದ್ದು, ಸಂತ್ರಸ್ತರ ಜೊತೆ ಸಮಾಲೋಚನೆ ನಡೆಸಿದ್ದಾರೆ.
ವಯನಾಡಲ್ಲಿ ಭೂಕುಸಿತದಿಂದ 320ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 300ಕ್ಕೂ ಹೆಚ್ಚು ಮಂದಿ ಇನ್ನು ಕೂಡ ನಾಪತ್ತೆಯಾಗಿದ್ದಾರೆ. ಅವರ ಪತ್ತೆ ಕಾರ್ಯಚರಣೆ ಮುಂದುವರಿದಿದೆ.
ಭೂಕುಸಿತ ಪೀಡಿತ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಲ್ವರನ್ನು ಜೀವಂತವಾಗಿ ಇಂದು ರಕ್ಷಣೆ ಮಾಡಲಾಗಿದೆ.