Breaking:

ವಯನಾಡು ದುರಂತ; ಪ್ರವಾಹದ ನೀರಿನಲ್ಲಿ ಸಿಲುಕಿದ ಮಗುವನ್ನು ರಕ್ಷಿಸುವಾಗ ಸ್ವಂತ ಮಗುವನ್ನು ಕಳೆದುಕೊಂಡ ಮಹಿಳೆ

ಮೆಪ್ಪಾಡಿ: ಕೇರಳದ ವಯನಾಡು ಮೆಪ್ಪಾಡು ಭೂಕುಸಿತ ಪ್ರದೇಶದಲ್ಲಿ 276ಕ್ಕೂ  ಅಧಿಕ ಮಂದಿಯ ಮೃತದೇಹ ಪತ್ತೆಯಾಗಿದೆ. ನೂರಾರು ಮಂದಿ ಇನ್ನು ಕೂಡ ನಾಪತ್ತೆಯಾಗಿದ್ದಾರೆ.

ಈ ವೇಳೆ ಹಲವು ಘಟನೆಗಳು ನಡೆದಿದೆ. ಧಾರಾಕಾರ ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ಯಾರದ್ದೋ ಮಗುವನ್ನು ರಕ್ಷಿಸುವ ಪ್ರಯತ್ನದಲ್ಲಿ ಪ್ರಜಿತಾ ಎಂಬ ಮಹಿಳೆ ತನ್ನ ಸ್ವಂತ ಮಗಳನ್ನು ಕಳೆದುಕೊಂಡಿದ್ದಾರೆ. ಪ್ರವಾಹದ ನೀರಿನಲ್ಲಿ ಸಿಲುಕಿದ ಮಗುವನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾಗ ಪ್ರಜಿತಾ ಅವರ 10 ವರ್ಷದ ಮಗಳು ಅಹನ್ಯಾಗೆ ಕರೆಂಟ್ ಶಾಕ್ ಹೊಡೆದು ಸಾವನ್ನಪ್ಪಿದ್ದಾಳೆ. ಅಹನ್ಯಾಳನ್ನು ಎಳೆಯಲು ಹೋದ ಪ್ರಜಿತಾ ಕುಟುಂಬಸ್ಥರಿಗೂ ಗಾಯಗಳಾಗಿವೆ.

ಪ್ರಜಿತಾ, ಆಕೆಯ ತಾಯಿ ಶೋಭಾ ಹಾಗೂ ಆಕೆಯ ಮಾವ ಗಂಭೀರವಾಗಿ ಗಾಯಗೊಂಡು ವಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಜಿತಾ ಅವರ ಮುಖ ಮತ್ತು ತೊಡೆಯ ಮೂಳೆಗೆ ತೀವ್ರ ಗಾಯಗಳಾಗಿವೆ. ಶೋಭಾ ಅವರ ಪಕ್ಕೆಲುಬಿಗೆ ಕೂಡ ಗಾಯವಾಗಿದೆ.

ಪ್ರಜಿತಾ ಅವರ ಮನೆ ಸುರಕ್ಷಿತ ವಲಯ ಎಂದು ಪರಿಗಣಿಸಲ್ಪಟ್ಟಿದ್ದ ಚೂರಲ್ಮಲಾದಲ್ಲಿತ್ತು. ಆದರೆ ಆ ಸ್ಥಳದಲ್ಲಿಯೇ ಈ ದುರಂತ ಸಂಭವಿಸಿದೆ. ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದಾಗಿ ಚೂರಲ್ಮಲಾ ಮತ್ತು ಮುಂಡಕಾಯಮ್‌ನ ಎತ್ತರದ ಪ್ರದೇಶದ ಎಲ್ಲ ಜನರು ಈ ಶಾಲೆಯಲ್ಲಿ ವಾಸವಾಗಿದ್ದರು. ಇದು ಈ ಪ್ರದೇಶದ ಅತ್ಯಂತ ಸುರಕ್ಷಿತ ಸ್ಥಳವೂ ಆಗಿತ್ತು. ಇಲ್ಲಿ ಇಂತಹ ಅನಾಹುತ ಸಂಭವಿಸುತ್ತದೆ ಎಂದು ಯಾರೂ ಭಾವಿಸಿರಲಿಲ್ಲ.

Share this article

ಟಾಪ್ ನ್ಯೂಸ್