Breaking:

ಕೇರಳದ ವಯನಾಡಿನಲ್ಲಿ ಭಾರೀ ಭೂಕುಸಿತ; ಸ್ಥಳದಲ್ಲಿ 19 ಮೃತದೇಹಗಳು ಪತ್ತೆ, ಅವಶೇಷಗಳಡಿ ನೂರಾರು ಮಂದಿ ಸಿಲುಕಿರುವ ಶಂಕೆ

ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶದಲ್ಲಿ ಭಾರೀ ಭೂಕುಸಿತ ಸಂಭವಿಸಿದ ಸಂಭವಿಸಿದ್ದು, ಸ್ಥಳದಲ್ಲಿ 19 ಮೃತದೇಹಗಳು ಪತ್ತೆಯಾಗಿವೆ ಮತ್ತು ಹಲವಾರು ಜನರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ. 

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಕೆಎಸ್‌ಡಿಎಂಎ) ಫೈರ್‌ಫೋರ್ಸ್ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳನ್ನು ಪೀಡಿತ ಪ್ರದೇಶಕ್ಕೆ ಕಳುಹಿಸಲಾಗಿದ್ದು, ಅವಶೇಷಗಳಡಿ ನೂರಾರು ಮಂದಿ ಸಿಲುಕಿರುವ ಶಂಕೆ ಇದೆ. ಕಣ್ಣೂರು ರಕ್ಷಣಾ ಭದ್ರತಾ ದಳದ ಎರಡು ತಂಡಗಳು, ಹೆಚ್ಚುವರಿ ಎನ್‌ಡಿಆರ್‌ಎಫ್ ತಂಡ ಕೂಡ ಸಹಾಯಕ್ಕೆ ತೆರಳುತ್ತಿದೆ.

ಪ್ರಧಾನಿ ನರೇಂದ್ರ ಮೋದಿ ಅವರು ಭೂಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿಗೆ ಸ್ಪಂದಿಸಿ ಕೇಂದ್ರ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಭರವಸೆ ನೀಡಿದ್ದಾರೆ. 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ದುಃಖತಪ್ತ ಕುಟುಂಬಗಳಿಗೆ ತಮ್ಮ  ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆ ತ್ವರಿತವಾಗಿ ಮಾಡಲು ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

ಭೂಕುಸಿತವು ಚೂರಲ್ಮಲಾದಲ್ಲಿನ ಮುಖ್ಯ ಸೇತುವೆಯನ್ನು ನಾಶಪಡಿಸಿದೆ, ಭೂಕುಸಿತದಿಂದ ಪ್ರಭಾವಿತವಾದ ವಿವಿಧ ಸ್ಥಳಗಳಲ್ಲಿ ಅನೇಕ ವ್ಯಕ್ತಿಗಳು ಸಿಲುಕಿಕೊಂಡಿದ್ದಾರೆ. ತಾತ್ಕಾಲಿಕ ಸೇತುವೆ ನಿರ್ಮಿಸಲು, ಹೆಲಿಕಾಪ್ಟರ್ ಮೂಲಕ ಜನರನ್ನು ಸ್ಥಳಾಂತರಿಸಲು ಮತ್ತು ದುರಂತದ ಸ್ಥಳದಲ್ಲಿ ಅಗತ್ಯ ವ್ಯವಸ್ಥೆಗಳನ್ನು ಸ್ಥಾಪಿಸಲು ಸೇನೆಯ ನೆರವು ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭರವಸೆ ನೀಡಿದ್ದಾರೆ.


Share this article

ಟಾಪ್ ನ್ಯೂಸ್