Breaking:

ನರ್ಸಿಂಗ್ ಕೋರ್ಸ್ ಪ್ರವೇಶ ಪರೀಕ್ಷೆಯಲ್ಲಿ ಭಾರೀ ಅವ್ಯವಹಾರ; ಗುಪ್ತಾಂಗದಲ್ಲಿ ಮೊಬೈಲ್ ಇಟ್ಟುಕೊಂಡು ಬಂದು ಸಿಕ್ಕಿ ಬಿದ್ದ ಅಭ್ಯರ್ಥಿಗಳು

ಪರೀಕ್ಷೆ ಕೊಠಡಿಯೊಳಗೆ ಅಭ್ಯರ್ಥಿಗಳು ಗುಪ್ತಾಂಗದಲ್ಲಿ ಮೊಬೈಲ್ ಇಟ್ಟುಕೊಂಡು ಬಂದು ಸಿಕ್ಕಿ ಬಿದ್ದಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಬೀರ್ಭುಮ್‌ನ ಸೂರಿಯ ಬೆನಿಮಾಧಬ್ ಇನ್ಸ್ಟಿಟ್ಯೂಷನ್‌ನಲ್ಲಿ ಎಎನ್‌ಎಂ ಮತ್ತು ಜಿಎನ್‌ಎಂ ನರ್ಸಿಂಗ್ ಕೋರ್ಸ್‌ಗೆ ಪ್ರವೇಶ ಪರೀಕ್ಷೆ ನಡೆಯುತ್ತಿತ್ತು. ಮಾಲ್ಡಾದ ಕೆಲವು ವಿದ್ಯಾರ್ಥಿಗಳು ಸೂರಿಯ ಬೆನಿಮಾಧಬ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಿದ್ದರು.

ಪರೀಕ್ಷೆಗಳು ಪ್ರಾರಂಭವಾದ ತಕ್ಷಣ, ಕೊಠಡಿಯೊಳಗೆ ಕಭದ್ರತಾ ಸಿಬ್ಬಂದಿಗಳಿಗೆ ಮೊಬೈಲ್‌ ಬಳಕೆ ಅನುಮಾನ ಬಂದಿತು. ನಂತರ ವಿದ್ಯಾರ್ಥಿಗಳನ್ನು ಪರೀಕ್ಷೆಗಾಗಿ ಮತ್ತೊಂದು ಸಭಾಂಗಣಕ್ಕೆ ಕರೆದೊಯ್ಯಲಾಯಿತು. ಅಲ್ಲಿ ಒಬ್ಬೊಬ್ಬರನ್ನೇ ವಿಚಾರಣೆಗೆ ಒಳಪಡಿಸಿ ತಪಾಸಣೆ ನಡೆಸಲಾಯಿತು. ಮೆಟಲ್ ಡಿಟೆಕ್ಟರ್‌ ಗಳ ಮೂಲಕ ದೇಹವನ್ನು ಹುಡುಕುತ್ತಿದ್ದಂತೆ, ಕೆಲ ವಿದ್ಯಾರ್ಥಿನಿಯರು ತಮ್ಮ ಗುಪ್ತಾಂಗದಲ್ಲಿ ಮೊಬೈಲ್‌ ಇಟ್ಟುಕೊಂಡಿರುವುದು ಪತ್ತೆಯಾಗಿದೆ.

ಮೊಬೈಲ್‌ ಇಟ್ಟುಕೊಂಡು ಬಂದಿದ್ದವರನ್ನೆಲ್ಲಾ ವಶಕ್ಕೆ ಪಡೆದ ಅಧಿಕಾರಿಗಳು ಅವರನ್ನು ಪರೀಕ್ಷೆಗಳಿಂದ ಡಿಬಾರ್‌ ಮಾಡಿದ್ದಾರೆ.

Share this article

ಟಾಪ್ ನ್ಯೂಸ್