-ದೇಶದಾದ್ಯಂತ ಭಾರೀ ಸದ್ದು ಮಾಡಿದ ಪ್ರಕರಣ
ಪ.ಬಂಗಾಳದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ನಾತಕೋತ್ತರ ತರಬೇತಿ ವೈದ್ಯೆ ಮೇಲಿನ ಲೈಂಗಿನ ಕಿರುಕುಳ, ಹತ್ಯೆ ಪ್ರಕರಣ ದೇಶದಲ್ಲಿ ಭಾರೀ ಸದ್ದು ಮಾಡುತ್ತಿದೆ.
ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರಿಗೆ ಪತ್ರ ಬರೆದಿರುವ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (ಫೋರ್ಡಾ) 24 ಗಂಟೆಗಳ ಒಳಗೆ ಕ್ರಮ ಕೈಗೊಳ್ಳದಿದ್ದರೆ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಎಚ್ಚರಿಸಿದೆ.
ಶುಕ್ರವಾರ ಕೋಲ್ಕತ್ತದ ಸರ್ಕಾರಿ ಆಸ್ಪತ್ರೆಯ ಸೆಮಿನಾರ್ ಹಾಲ್‌ನಲ್ಲಿ ಮಹಿಳಾ ಸ್ನಾತಕೋತ್ತರ ವೈದ್ಯ ವಿದ್ಯಾರ್ಥಿನಿಯ ಅರೆ ನಗ್ನ ಶವ ಪತ್ತೆಯಾಗಿತ್ತು. ಆಕೆಯ ದೇಹದ ಮೇಲೆ ಗಾಯದ ಗುರುತುಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವೈದ್ಯೆಯು ಔಷಧ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದಳು ಎಂದು ತಿಳಿದು ಬಂದಿದೆ.
ಆಸ್ಪತ್ರೆಯೊಳಗೆ ಮಗಳ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಯನ್ನು ಕೊಲೆ ಮಾಡಲಾಗಿದೆ. ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಲಾಗುತ್ತಿದೆ ಎಂದು ಮೃತ ವೈದ್ಯೆಯ ತಂದೆ ಆರೋಪಿಸಿದ್ದಾರೆ.
ವೈದ್ಯೆಗೆ ಲೈಂಗಿಕ ಕಿರುಕುಳ ನೋಡಿ ಹತ್ಯೆ ಮಾಡಲಾಗಿದೆ ಎಂದು ಮರಣೋತ್ತರ ವರದಿಯಲ್ಲಿ ದೃಢಪಟ್ಟಿದ್ದು, ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.