21 ವರ್ಷದ ಯುವತಿಯೋರ್ವಳು ನಾಲ್ಕು ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಘಟನೆ ರಾಜಸ್ಥಾನದ ಜೈಪುರದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ರಾಜಸ್ಥಾನದ ದೌಸಾ ಜಿಲ್ಲೆಯ ನಿವಾಸಿ ಸಂತೋಷ ದೇವಿ ನಾಲ್ಕು ಮಕ್ಕಳಿಗೆ ಜನ್ಮ ನೀಡಿದ ತಾಯಿ. ನಾಲ್ಕು ಮಕ್ಕಳಲ್ಲಿ ಎರಡು ಗಂಡು, ಎರಡು ಹೆಣ್ಣು ಮಕ್ಕಳಿವೆ. ಸಧ್ಯ ನಾಲ್ಕು ಮಕ್ಕಳನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಕುರಿತು ಮಾಹಿತಿ ನೀಡಿರುವ ಆಸ್ಪತ್ರೆಯ ವೈದ್ಯೆ ಡಾ.ಆಶಾ ವರ್ಮಾ, ನಮ್ಮ ಆಸ್ಪತ್ರೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಈ ಹಿಂದೆ ಮಹಿಳೆಯೊಬ್ಬರು ಮೂರು ಮಕ್ಕಳಿಗೆ ಜನ್ಮ ನೀಡಿದ ದಾಖಲೆ ಇತ್ತು. ನಾವು ನಾಲ್ಕು ಮಕ್ಕಳನ್ನು ಆರೈಕೆ ಮಾಡಲಾಗುತ್ತಿದ್ದು, ಎಲ್ಲರ ಆರೋಗ್ಯವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ತಾಯಿ ಸಂತೋಷ ದೇವಿ ಗರ್ಭಾಶಯಕ್ಕೆ ಸಂಬಂಧಿಸಿದ ಎನಿಮಿಯಾ ಸಮಸ್ಯೆಯಿಂದ ಬಳಲುತ್ತಿದ್ದರು. ಮಹಿಳೆಗೂ ನಮ್ಮ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ತಾಯಿ ಆರೋಗ್ಯ ಸರಿ ಇಲ್ಲ. ನಾಲ್ಕು ಮಕ್ಕಳ ಆರೋಗ್ಯದಲ್ಲಿಯೂ ವ್ಯತ್ಯಾಸ ಕಂಡು ಬಂದಿದ್ದು, ಚಿಕಿತ್ಸೆ ನೀಡಲಾಗುತ್ತಿದ್ದು, ಸುಧಾರಣೆಗೆ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೇಳಿದ್ದಾರೆ.