ಯಾದಗಿರಿ ನಗರದ ಪಿಎಸ್‌ಐ ಪರಶುರಾಮ್ ಹೃದಯಾಘಾತದಿಂದ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಪುತ್ರನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದೆ.
ಸೈಬರ್ ಕ್ರೈಂ ಠಾಣೆಯ ಪಿಎಸ್‌ಐ ಪರಶುರಾಮ(34) ಅನುಮಾನಸ್ಪಾದವಾಗಿ ಸಾವನ್ನಪ್ಪಿದ ಘಟನೆ ಯಾದಗಿರಿ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಸಾವಿಗೆ ಸ್ಥಳೀಯ ಶಾಸಕ ಚೆನ್ನಾರೆಡ್ಡಿ ಪಾಟೀಲ್, ಅವರ ಪುತ್ರ ಪಂಪನಗೌಡ ಕಾರಣ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಕಳೆದ ಎರಡು ದಿನಗಳ ಹಿಂದೆ ಯಾದಗಿರಿ ನಗರ ಠಾಣೆಯಿಂದ ಸೈಬರ್ ಕ್ರೈಂ ಠಾಣೆಗೆ ವರ್ಗಾವಣೆಯಾಗಿದ್ದ ಪರಶುರಾಮ, ವರ್ಗಾವಣೆಯಾದ ಎರಡೇ ದಿನದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.
ಪೋಸ್ಟಿಂಗ್‌ಗಾಗಿ ಯಾದಗಿರಿ ಕಾಂಗ್ರೆಸ್ ಶಾಸಕ ಚೆನ್ನಾರಡ್ಡಿ ಪಾಟೀಲ್ ಲಕ್ಷ ಲಕ್ಷ ಬೇಡಿಕೆ ಇಟ್ಟಿದ್ದರು ಇದರಿಂದ ಒತ್ತಡಕ್ಕೊಳಗಾಗಿ ಮೃತರಾಗಿದ್ದಾರೆ. ಈ ಸಾವಿಗೆ ಯಾದಗಿರಿ ಶಾಸಕರೇ ಕಾರಣ ಎಂದು ಪಿಎಸ್ ಐ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.
ಪೋಸ್ಟಿಂಗ್ ಗಾಗಿ ಪದೇ ಪದೇ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಶಾಸಕರ ವಿರುದ್ಧ ಹಾಗೂ ಶಾಸಕನ ಪುತ್ರನ ವಿರುದ್ಧ ಪಿಎಸ್‌ಐ ಪರಶುರಾಮ್ ಪತ್ನಿ ಶ್ವೇತಾ ಯಾದಗಿರಿ ಎಸ್ ಪಿ ಸಂಗೀತಾ ಅವರಿಗೆ ದೂರು ನೀಡಿದ್ದಾರೆ