-ಯಾಸೀನ್ ಮೋಮಿನ್ ಕೊಲೆಯಾದ ಯುವಕ
ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಲಕ್ಷ್ಮೇಶ್ವರ ಬಳಿ ನಡೆದಿದೆ.
ಲಕ್ಷ್ಮೇಶ್ವರ ನಿವಾಸಿ ಮೋಮಿನ್ (28) ಕೊಲೆಯಾದ ಯುವಕನಾಗಿದ್ದಾನೆ.
ಮಾರಕಾಸ್ತ್ರ ಹಿಡಿದು ಬಂದ ವ್ಯಕ್ತಿ ಏಕಾಏಕಿ ದಾಳಿ ಮಾಡಿ ಮೋಮಿನ್ ಗೆ ಕೊಲೆ ಮಾಡಿದ್ದಾನೆ. ನೋಡ ನೋಡುತ್ತಿದ್ದಂತೆ ಯುವಕ ಮೇಲೆ ದಾಳಿ ನಡೆದಿದೆ.
ಸ್ಥಳಕ್ಕೆ ಕುಲಗೋಡ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕುಲಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ರಕ್ತಸಿಕ್ತವಾಗಿ ಬಿದ್ದಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.